MAP

ಗಾಝಾ ದಾಳಿಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಜನ ಸಾವು

ಗಾಝಾ ಪಟ್ಟಿಯಲ್ಲಿ ಶುಕ್ರವಾರ ರಾತ್ರಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸಹಿತ ಕನಿಷ್ಟ 14 ಮಂದಿ ಸಾವನ್ನಪ್ಪಿದ್ದು ಇತರ 33 ಮಂದಿ ಗಾಯಗೊಂಡಿರುವುದಾಗಿ ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ಶನಿವಾರ ವರದಿ ಮಾಡಿದೆ.

ವರದಿ: ವ್ಯಾಟಿಕನ್ ನ್ಯೂಸ್

ಗಾಝಾ ಪಟ್ಟಿಯಲ್ಲಿ ಶುಕ್ರವಾರ ರಾತ್ರಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸಹಿತ ಕನಿಷ್ಟ 14 ಮಂದಿ ಸಾವನ್ನಪ್ಪಿದ್ದು ಇತರ 33 ಮಂದಿ ಗಾಯಗೊಂಡಿರುವುದಾಗಿ ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ಶನಿವಾರ ವರದಿ ಮಾಡಿದೆ.

ಖಾನ್ ಯೂನಿಸ್ ನಗರದ ದಕ್ಷಿಣದಲ್ಲಿ ಸ್ಥಳಾಂತರಿತಗೊಂಡವರು ನೆಲೆಸಿದ್ದ ಶಿಬಿರಗಳ ಮೇಲೆ ನಡೆದ ಮೊದಲ ದಾಳಿಯಲ್ಲಿ ಕನಿಷ್ಟ 9 ಮಂದಿ ಸಾವನ್ನಪ್ಪಿದ್ದು ಇತರ 11 ಮಂದಿ ಗಾಯಗೊಂಡಿದ್ದಾರೆ ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರರು ಹಾಗೂ ರೆಡ್‍ಕ್ರೆಸೆಂಟ್ ಮೂಲಗಳನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಗಾಝಾ ನಗರದ ಅಲ್-ತುಫಾ ಜಿಲ್ಲೆಯಲ್ಲಿ ಸ್ಥಳಾಂತರಗೊಂಡವರು ನೆಲೆಸಿದ್ದ ಶಾಲೆಯ ಮೇಲೆ ನಡೆದ ಎರಡನೇ ದಾಳಿಯಲ್ಲಿ 5 ಮಂದಿ ಮೃತಪಟ್ಟಿದ್ದು ಕನಿಷ್ಟ 22 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಈ ಮಧ್ಯೆ, ಉತ್ತರ ಗಾಝಾದ ಜಬಾಲಿಯಾ ಪ್ರದೇಶದಲ್ಲಿ ಹಾಗೂ ದಕ್ಷಿಣ ಗಾಝಾದ ರಫಾ ಪ್ರದೇಶದಲ್ಲಿ ಹಲವಾರು ಸಶಸ್ತ್ರ ಹೋರಾಟಗಾರರನ್ನು ಹತ್ಯೆ ಮಾಡಿರುವುದಾಗಿ ಇಸ್ರೇಲ್ ಸೇನೆ ಹೇಳಿದೆ.

10 ನವೆಂಬರ್ 2024, 14:46