MAP

ಆಸ್ಪತ್ರೆಯಿಂದಲೇ ಗಾಝಾ ಪರಿಸ್ಥಿತಿ ಅರಿಯಲು ಕರೆ ಮಾಡಿದ ಪೋಪ್ ಫ್ರಾನ್ಸಿಸ್

ಪೋಪ್ ಫ್ರಾನ್ಸಿಸ್ ಅವರು ರೋಮ್ ನಗರದ ಜೆಮೆಲ್ಲಿ ಆಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಗೆ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಇದೇ ವೇಳೆ ಅವರು ಪ್ರಸ್ತುತ ಗಾಝಾದಲ್ಲಿನ ಪರಿಸ್ಥಿತಿಯನ್ನು ಅರಿತುಕೊಳ್ಳುವ ಸಲುವಾಗಿ ಇಲ್ಲಿನ ಸ್ಥಳೀಯ ಗುರುಗಳಿಗೆ ಕರೆ ಮಾಡಿ ಮಾತನಾಡಿದ್ದಾರೆ. ಆ ಮೂಲಕ ಯುದ್ಧಗ್ರಸ್ಥ ಗಾಝಾದ ಕುರಿತು ತಮ್ಮ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ ಎಂದು ವ್ಯಾಟಿಕನ್ ಮಾಧ್ಯಮವು ವರದಿ ಮಾಡಿದೆ.

ವರದಿ: ವ್ಯಾಟಿಕನ್ ನ್ಯೂಸ್

ಪೋಪ್ ಫ್ರಾನ್ಸಿಸ್ ಅವರು ರೋಮ್ ನಗರದ ಜೆಮೆಲ್ಲಿ ಆಸ್ಪತ್ರೆಯಲ್ಲಿ ಮತ್ತೊಂದು ವಿಶ್ರಾಂತ ರಾತ್ರಿಯನ್ನು ಕಳೆದಿದ್ದಾರೆ ಎಂದು ವ್ಯಾಟಿಕನ್ ಮಾಧ್ಯಮ ಕಚೇರಿಯು ವರದಿ ಮಾಡಿದೆ. ಇದೇ ವೇಳೆ ಪೋಪ್ ಫ್ರಾನ್ಸಿಸ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

ವ್ಯಾಟಿಕನ್ನಿನ ಮಾಧ್ಯಮ ಕಚೇರಿಯು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿಯ ಕುರಿತು ಮಾಹಿತಿಯನ್ನು ನೀಡಿದೆ. ಆ ಮಾಹಿತಿಯ ಪ್ರಕಾರ ಪೋಪ್ ಫ್ರಾನ್ಸಿಸ್ ಅವರು ಮತ್ತೊಂದು ವಿಶ್ರಾಂತ ರಾತ್ರಿಯನ್ನು ಕಳೆದಿದ್ದಾರೆ. ಪೋಪ್ ಫ್ರಾನ್ಸಿಸ್ ಅವರು ರೋಮ್ ನಗರದ ಜೆಮೆಲ್ಲಿ ಆಸ್ಪತ್ರೆಯಲ್ಲಿ ಬ್ಯಾಕ್ಟೀರಿಯಲ್ ನ್ಯುಮೋನಿಯಾಕ್ಕಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.  

ಇಂದು ಪೋಪ್ ಫ್ರಾನ್ಸಿಸ್ ಅವರು ರೆಸ್ಪಿರೇಟರಿ ಫಿಸಿಯಾಲಜಿ ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ ಹಾಗೂ ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸಿದ್ದಾರೆ ಎಂದು ಮಾಧ್ಯಮ ಕಚೇರಿಯು ತನ್ನ ಮಾಧ್ಯಮ ಹೇಳಿಕೆಯಲ್ಲಿ ಹೇಳಿದೆ.

ಪೋಪ್ ಫ್ರಾನ್ಸಿಸ್ ಅವರು ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದು, ಒಟ್ಟಾರೆ ಅವರ ಅರೋಗ್ಯ ಸ್ಥಿತಿಯು ಸುಸ್ಥಿರವಾಗಿದೆ. ಅವರ ಹೃದಯ, ಕಿಡ್ನಿ ಹಾಗೂ ರಕ್ತನಾಳಗಳಿಗೆ ಯಾವುದೇ ತೊಂದರೆ ಇಲ್ಲವೆಂದು ವೈದ್ಯರು ಹೇಳಿದ್ದಾರೆ.

ಫೆಬ್ರವರಿ 14 ರಿಂದ ಈವರೆಗೂ ನ್ಯುಮೋನಿಯ ಸಮಸ್ಯೆಗಾಗಿ ಪೋಪ್ ಫ್ರಾನ್ಸಿಸ್ ಅವರು ರೋಮ್ ನಗರದ ಜೆಮೆಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.  

06 ಮಾರ್ಚ್ 2025, 16:17