ಜೆಮೆಲ್ಲಿ ಆಸ್ಪತ್ರೆ ಆವರಣದಲ್ಲಿ ಜನತೆಯನ್ನು ಭೇಟಿಯಾಗಲಿರುವ ಪೋಪ್ ಫ್ರಾನ್ಸಿಸ್
ವರದಿ: ವ್ಯಾಟಿಕನ್ ನ್ಯೂಸ್
ಪೋಪ್ ಫ್ರಾನ್ಸಿಸ್ ಅವರು ಭಾನುವಾರ ಮಧ್ಯಾಹ್ನ 12 ಗಂಟೆಗೆ ರೋಮ್ ನಗರದ ಜೆಮೆಲ್ಲಿ ಆಸ್ಪತ್ರೆಯ ಆವರಣದಲ್ಲಿ ಜನತೆಯ ಗುಂಪನ್ನು ಭೇಟಿ ಮಾಡಲಿದ್ದಾರೆ ಎಂದು ವ್ಯಾಟಿಕನ್ ಮಾಧ್ಯಮ ಕಚೇರಿಯು ತಿಳಿಸಿದೆ.
ಪೋಪ್ ಫ್ರಾನ್ಸಿಸ್ ಅವರು ಭಾನುವಾರ ಭಕ್ತಾಧಿಗಳನ್ನು ಭೇಟಿ ಮಾಡಿ, ಅವರನ್ನು ಆಶೀರ್ವದಿಸಲಿದ್ದಾರೆ ಎಂದು ಶನಿವಾರ ಬೆಳಿಗ್ಗೆ ವ್ಯಾಟಿಕನ್ ಮಾಧ್ಯಮ ಪೀಠವು ವರದಿ ಮಾಡಿದೆ.
ವೈದ್ಯರು ಯಾವಾಗ ಪೋಪ್ ಫ್ರಾನ್ಸಿಸ್ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಇನ್ನೂ ತಿಳಿಸಿಲ್ಲ. ಅದಾಗ್ಯೂ, ಪೋಪ್ ಫ್ರಾನ್ಸಿಸ್ ಅವರು ಆಸ್ಪತ್ರೆಗೆ ದಾಖಲಾದಾಗಿನಿಂದ ಇದೇ ಮೊದಲ ಬಾರಿಗೆ ಜನತೆಯನ್ನು ಭೇಟಿ ಮಾಡುತ್ತಿದ್ದಾರೆ. ಆಸ್ಪತ್ರೆಯಲ್ಲಿದ್ದರೂ ಸಹ ಪೋಪ್ ಫ್ರಾನ್ಸಿಸ್ ಅವರು ತಮ್ಮ ಕಾರ್ಯವನ್ನು ಮುಂದುವರೆಸಿದ್ದಾರೆ. ಯುದ್ಧಗ್ರಸ್ತ ಪ್ರದೇಶಗಳ ಜನತೆಗೆ ಸಂದೇಶಗಳನ್ನು ಕಳುಹಿಸುವುದು, ಪ್ರಾರ್ಥಿಸುವುದು, ಆಧ್ಯಾತ್ಮಿಕ ಕಾರ್ಯಗಳಲ್ಲಿ ಆನ್ಲೈನ್ ಮೂಲಕ ಭಾಗವಹಿಸಿದ್ದಾರೆ, ಬಲಿಪೂಜೆಯನ್ನು ಅರ್ಪಿಸಿದ್ದಾರೆ ಹಾಗೂ ಮುಖ್ಯವಾದ ನಿರ್ಧಾರಗಳನ್ನೂ ಸಹ ತೆಗೆದುಕೊಂಡಿದ್ದಾರೆ.
ಇದೇ ವೇಳೆ ಅವರು ತಮ್ಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುವ ಸಂದೇಶವನ್ನೂ ಸಹ ಕಳುಹಿಸಿದ್ದರು ಎಂಬುದನ್ನು ನಾವಿಲ್ಲಿ ಸ್ಮರಿಸಿಕೊಳ್ಳಬಹುದು.