MAP

ಪೋಪ್ ಫ್ರಾನ್ಸಿಸ್ ಅವರ ಸ್ಥಿತಿ ಸ್ಥಿರವಾಗಿದೆ

ವ್ಯಾಟಿಕನ್ ಮಾಧ್ಯಮ ಕಚೇರಿಯು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿಯ ಮಾಹಿತಿಯನ್ನು ನೀಡಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದೆ.

ವರದಿ: ವ್ಯಾಟಿಕನ್ ನ್ಯೂಸ್

ವ್ಯಾಟಿಕನ್ ಮಾಧ್ಯಮ ಕಚೇರಿಯು ಪೋಪ್ ಫ್ರಾನ್ಸಿಸ್ ಅವರ ಆರೋಗ್ಯ ಸ್ಥಿತಿಯ ಮಾಹಿತಿಯನ್ನು ನೀಡಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದೆ.  

ಇಂದೂ ಸಹ ಪೋಪ್ ಫ್ರಾನ್ಸಿಸ್ ಅವರು ವಿಶ್ರಾಂತಿಯನ್ನು ತೆಗೆದುಕೊಂಡರು. ಅವರ ಆರೋಗ್ಯಸ್ಥಿತಿಯು ಸ್ಥಿರವಾಗಿದೆ. ನಾನ್-ಇವೇಸಿವ್ ವೆಂಟಿಲೇಟರ್ ಅನ್ನು ಅವರಿಗೆ ಇಂದು ಬಳಸಲಿಲ್ಲ ಎಂದು ವ್ಯಾಟಿಕನ್ ಮಾಧ್ಯಮ ಕಚೇರಿಯು ಮಾಹಿತಿಯನ್ನು ನೀಡಿದೆ.

ಇಂದು ಬೆಳಿಗ್ಗೆ ಪೋಪ್ ಫ್ರಾನ್ಸಿಸ್ ಅವರು ತಮ್ಮನ್ನು ಆರೈಕೆ ಮಾಡುತ್ತಿರುವವರೊಂದಿಗೆ ಬಲಿಪೂಜೆಯನ್ನು ಅರ್ಪಿಸಿದರು. ತದನಂತರ ಪ್ರಾರ್ಥನೆ ಹಾಗೂ ವಿಶ್ರಾಂತಿಯಲ್ಲಿ ತಮ್ಮ ಸಮಯವನ್ನು ಕಳೆದರು ಎಂದು ಮಾಹಿತಿಯನ್ನು ನೀಡಲಾಗಿದೆ. 

ಆದರೂ ಪೋಪ್ ಫ್ರಾನ್ಸಿಸ್ ಅವರ ಚಿಕಿತ್ಸೆ ಮುಂದುವರೆಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದು ವ್ಯಾಟಿಕನ್ ಹೇಳಿದೆ. 

03 ಮಾರ್ಚ್ 2025, 09:08