ಪ್ರಾರ್ಥನೆಗಳಿಗೆ, ಶುಭ ಹಾರೈಕೆಗಳಿಗೆ ಧನ್ಯವಾದ ತಿಳಿಸಿದ ಪೋಪ್ ಫ್ರಾನ್ಸಿಸ್
ವರದಿ: ವ್ಯಾಟಿಕನ್ ನ್ಯೂಸ್
ಪೋಪ್ ಫ್ರಾನ್ಸಿಸ್ ಅವರು ರೋಮ್ ನಗರದ ಜೆಮೆಲ್ಲಿ ಅಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ. ಈ ವೇಳೆ ಅವರು ತಮ್ಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತಿರುವ ಹಾಗೂ ಶುಭಾಶಯಗಳನ್ನು ತಿಳಿಸುತ್ತಿರುವ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದಾರೆ.
ಪೋಪ್ ಫ್ರಾನ್ಸಿಸ್ ಅವರು ಅನಾರೋಗ್ಯದಿಂದ ರೋಮ್ ನಗರದ ಜೆಮೆಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಕಳೆದ ಎರಡು ವಾರಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು, ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ವಿಶ್ವದಾದ್ಯಂತ ಕೋಟ್ಯಾಂತರ ಭಕ್ತಾಧಿಗಳು ಪ್ರಾರ್ಥಿಸುತ್ತಿದ್ದಾರೆ. ಈ ನಡುವೆ ವಿವಿಧ ಪ್ರಮುಖ ವ್ಯಕ್ತಿಗಳು ಅವರು ಶೀಘ್ರ ಗುಣಮುಖರಾಗಲೆಂದು ಶುಭಾಶಯಗಳನ್ನು ತಿಳಿಸಿದ್ದಾರೆ.
ಪೋಪ್ ಫ್ರಾನ್ಸಿಸ್ ಅವರಿಂದ ಮಾಹಿತಿಯನ್ನು ಪಡೆದುಕೊಂಡು ಪಠಿಸಲಾದ ತ್ರಿಕಾಲ ಪ್ರಾರ್ಥನೆಯ ಚಿಂತನೆಯಲ್ಲಿ ಪೋಪ್ ಫ್ರಾನ್ಸಿಸ್ ಅವರು ನಾವು ದೇವರ ಮೇಲೆ ನೋಟವನ್ನು ನೆಟ್ಟು, ವಿಶ್ವಾಸದಲ್ಲಿ ಮುಂದುವರೆಯಬೇಕು ಎಂದು ಹೇಳಿದ್ದಾರೆ. ಪ್ರಭು ಯೇಸುಕ್ರಿಸ್ತರನ್ನು ನಮ್ಮ ಆದರ್ಶವೆಂದು ಇಟ್ಟುಕೊಂಡು ನಾವು ಮುಂದುವರೆಯಬೇಕು ಎಂದು ಪೋಪ್ ಫ್ರಾನ್ಸಿಸ್ ಅವರು ಹೇಳಿದ್ದಾರೆ.
ಮುಂದುವರೆದು ಹೇಳಿರುವ ಅವರು "ನನಗಾಗಿ ಪ್ರಾರ್ಥನೆಗಳನ್ನು ಸಲ್ಲಿಸುತ್ತಿರುವ ಹಾಗೂ ಹಾರೈಸುತ್ತಿರುವ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ. ನೀವು ನನ್ನೊಂದಿಗೆ ತೋರ್ಪಡಿಸುತ್ತಿರುವ ಐಕಮತ್ಯಕ್ಕಾಗಿ ದೇವರು ನಿಮ್ಮನ್ನು ಆಶೀರ್ವದಿಸಲಿ" ಎಂದು ಪೋಪ್ ಫ್ರಾನ್ಸಿಸ್ ಅವರು ಹೇಳಿದ್ದಾರೆ.